ADVERTISEMENT

ಕಾರವಾರ: ಯುದ್ಧನೌಕೆ ವಸ್ತು ಸಂಗ್ರಹಾಲಯಕ್ಕೆ ಜನವೋ ಜನ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 13:23 IST
Last Updated 25 ಡಿಸೆಂಬರ್ 2024, 13:23 IST
ಪ್ರವಾಸಿಗರು ಕಾರವಾರದ ಟ್ಯಾಗೋರ್ ಕಡಲತೀರದಲ್ಲಿರುವ ಐಎನ್ಎಸ್ ಚಪಲ್ ಯುದ್ಧನೌಕೆ ವಸ್ತು ಸಂಗ್ರಹಾಲಯ ವೀಕ್ಷಣೆಯಲ್ಲಿ ತೊಡಗಿರುವುದು
ಪ್ರವಾಸಿಗರು ಕಾರವಾರದ ಟ್ಯಾಗೋರ್ ಕಡಲತೀರದಲ್ಲಿರುವ ಐಎನ್ಎಸ್ ಚಪಲ್ ಯುದ್ಧನೌಕೆ ವಸ್ತು ಸಂಗ್ರಹಾಲಯ ವೀಕ್ಷಣೆಯಲ್ಲಿ ತೊಡಗಿರುವುದು   

ಕಾರವಾರ: ಶಾಲಾ ವಿದ್ಯಾರ್ಥಿಗಳ ಪ್ರವಾಸದ ಅವಧಿ, ಕ್ರಿಸ್‍ಮಸ್ ರಜೆ ಹಿನ್ನೆಲೆಯಲ್ಲಿ ಇಲ್ಲಿನ ಟ್ಯಾಗೋರ್ ಕಡಲತೀರದಲ್ಲಿರುವ ಐ.ಎನ್.ಎಸ್ ಚಪಲ್ ಯುದ್ಧನೌಕೆ ವಸ್ತು ಸಂಗ್ರಹಾಲಯಕ್ಕೆ ಕಳೆದ ಎರಡು ದಿನದಲ್ಲಿ ಎರಡೂವರೆ ಸಾವಿರದಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ.

ಹೊಸ ವರ್ಷದ ಆಚರಣೆಗೆ ಗೋವಾಕ್ಕೆ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ಸಾಗುವ ಮಾರ್ಗದಲ್ಲಿ ನಗರದ ವಿವಿಧ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ. ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಚಿನಲ್ಲೇ ಇರುವ ಯುದ್ಧನೌಕೆ ವಸ್ತು ಸಂಗ್ರಹಾಲಯ ಪ್ರವಾಸಿಗರನ್ನು ಸೆಳೆಯುತ್ತಿದೆ.

ತುಕ್ಕು ಹಿಡಿದು ಹಳತಾಗಿದ್ದ ಯುದ್ಧನೌಕೆಯನ್ನು ಕೆಲವು ತಿಂಗಳ ಹಿಂದಷ್ಟೆ ದುರಸ್ತಿಪಡಿಸಲಾಗಿತ್ತು. ಹೊಸದಾಗಿ ಬಣ್ಣ ಬಳಿದು ಸಿಂಗರಿಸಲಾಗಿತ್ತು. ಇದರಿಂದ ಆಕರ್ಷಣೆ ಮತ್ತಷ್ಟು ಹೆಚ್ಚಿದೆ.

ADVERTISEMENT

ಪ್ರವಾಸಿ ಸೀಸನ್‍ನಲ್ಲಿ ಸಹಜವಾಗಿ ಯುದ್ಧನೌಕೆ ವಸ್ತು ಸಂಗ್ರಹಾಲಯ ವೀಕ್ಷಣೆಗೆ ಬರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ವೀಕ್ಷಣೆ ಮಾಡಿದವರ ಸಂಖ್ಯೆ ನಿರೀಕ್ಷೆಗೂ ಮೀರಿದೆ. ನೂರಾರು ಶಾಲೆ ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಪ್ರವಾಸಿಗರು ವೀಕ್ಷಣೆಗೆ ಬಂದಿದ್ದರು ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.