ಯಲ್ಲಾಪುರ ತಾಲ್ಲೂಕಿನ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೊಮಗೇರಿ ಅಂಗನವಾಡಿ ಸಮೀಪ ಬೃಹತ್ ಮರ ಬಿದ್ದಿರುವುದು
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ): ತಾಲ್ಲೂಕಿನ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೊಮಗೇರಿ ಅಂಗನವಾಡಿ ಸಮೀಪ ಸೋಮವಾರ ಬುಡ ಸಮೇತ ಮರ ಬಿದ್ದು, ಅದರಡಿ ಸಿಲುಕಿ ಗರ್ಭಿಣಿ ಸಾವಿತ್ರಿ ಬಾಬು ಖರಾತ (28) ಹಾಗೂ ಸ್ವಾತಿ ಖರಾತ್ (17) ಎಂಬುವವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಕ್ಕಳು ಗಾಯಗೊಂಡಿದ್ದಾರೆ.
‘ಐದು ತಿಂಗಳ ಗರ್ಭಿಣಿಯಾಗಿದ್ದ ಸಾವಿತ್ರಿ, ಅಂಗನವಾಡಿಯಲ್ಲಿರುವ ತಮ್ಮ ಮಗುವನ್ನು ಕರೆತರಲು ತೆರಳಿದ್ದಾಗ ಅವಘಡ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಸ್ವಾತಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.