
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ದಾಂಡೇಲಿ: ನಗರದ ಕೆ.ಸಿ. ವೃತ್ತದ ಹತ್ತಿರ ಶುಕ್ರವಾರ ಮಧ್ಯಾಹ್ನ ಲಾರಿ ಚಾಲಕನೊಬ್ಬ ಹಠಾತ್ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಬನ್ನಿಹಳ್ಳಿ ಸಮೀಪದ ಕುಟ್ಟಪಟ್ಟಿ ಗ್ರಾಮದ ನಿವಾಸಿ ಮುರ್ಗನ್ ಪಚ್ಚಪ್ಪನ್ (52) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು ಕಾಗದ ಕಾರ್ಖಾನೆಗೆ ಕಚ್ಚಾ ವಸ್ತುಗಳನ್ನು ತೆಗೆದುಕೊಂಡು ಹೋಗಲು ದಾಂಡೇಲಿಗೆ ಬಂದಿದ್ದು ಮಧ್ಯಾಹ್ನ ಆರೋಗ್ಯದಲ್ಲಿ ತೊಂದರೆ ಕಂಡುಬಂದಿದೆ. ಹೃದಯಾಘಾತದಿಂದ ಸಾವನ್ನಪ್ಪಿದರು. ಸ್ಥಳಕ್ಕೆ ದಾಂಡೇಲಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.