ಭಟ್ಕಳ: ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಲಾಗಿದ್ದ ಒಂಬತ್ತು ಜಾನುವಾರನ್ನು ಶಹರ ಠಾಣೆ ಪೊಲೀಸರು ಭಾನುವಾರ ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಪಟ್ಟಣದ ಮುಗ್ದುಂ ಕಾಲೊನಿಯಲ್ಲಿದ್ದ ಲಾರಿಯಲ್ಲಿ ಜಾನುವಾರನ್ನು ತುಂಬಲಾಗಿತ್ತು. ಅವುಗಳನ್ನು ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ.
ಖಚಿತ ಮಾಹಿತಿ ಮೇರೆಗೆ ನಡೆಸಲಾದ ಕಾರ್ಯಾಚರಣೆಯಲ್ಲಿ ಪಿ.ಎಸೈ ಹನುಮಂತಪ್ಪ ಕುಡುಗುಂಟಿ, ಗ್ರಾಮೀಣ ಠಾಣೆ ಪಿ.ಎಸೈ ಭರತ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.