ADVERTISEMENT

ಹೊಟ್ಟೆಯಲ್ಲಿ ಗಡ್ಡೆ: ಯಶಸ್ವಿ ಶಸ್ತ್ರ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 3:17 IST
Last Updated 23 ಅಕ್ಟೋಬರ್ 2020, 3:17 IST
ಶಿರಸಿ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಗಡ್ಡೆ
ಶಿರಸಿ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಗಡ್ಡೆ   

ಶಿರಸಿ: ಮಹಿಳಾ ರೋಗಿಯೊಬ್ಬರ ಹೊಟ್ಟೆ ಯಲ್ಲಿ ಬೆಳೆದಿದ್ದ 4 ಕೆ.ಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ನಗರದ ಟಿ.ಎಸ್.ಎಸ್.ಆಸ್ಪತ್ರೆಯ ವೈದ್ಯರು ಹೊರತೆಗೆದಿದ್ದಾರೆ.

ಎರಡು ತಿಂಗಳಿ ನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.

ತಪಾಸಣೆ ನಡೆಸಿದಾಗ ಗಡ್ಡೆ ಬೆಳೆದಿದ್ದು ಪತ್ತೆಯಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಡಾ.ವಿಶ್ವಾಸ ಪೈ, ಡಾ.ಎ.ಬಿ.ವಿಜಯ್ ಕುಮಾರ್, ಡಾ.ಟಿ.ವಿನಾಯಕ, ಮನ್ಸೂರ್, ಮೇಘಾ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.