ADVERTISEMENT

ಹಿಂದೂ ಧರ್ಮಕ್ಕೆ ಮರಳಿದ 23 ಮಂದಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 13:44 IST
Last Updated 1 ಡಿಸೆಂಬರ್ 2020, 13:44 IST
ಹಳಿಯಾಳದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ 23 ಮಂದಿ ಹಿಂದೂ ಧರ್ಮಕ್ಕೆ ವಾಪಸಾದರು. ಸಂಸದ ಅನಂತಕುಮಾರ ಹೆಗಡೆ, ಮಾಜಿ ಶಾಸಕ ಸುನೀಲ ಹೆಗಡೆ ಚಿತ್ರದಲ್ಲಿದ್ದಾರೆ.
ಹಳಿಯಾಳದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ 23 ಮಂದಿ ಹಿಂದೂ ಧರ್ಮಕ್ಕೆ ವಾಪಸಾದರು. ಸಂಸದ ಅನಂತಕುಮಾರ ಹೆಗಡೆ, ಮಾಜಿ ಶಾಸಕ ಸುನೀಲ ಹೆಗಡೆ ಚಿತ್ರದಲ್ಲಿದ್ದಾರೆ.   

ಹಳಿಯಾಳ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ತಾಲ್ಲೂಕಿನ 23 ಮಂದಿ ಈಚೆಗೆ ಹಿಂದೂ ಧರ್ಮವನ್ನು ಪುನಃ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಅವರನ್ನು ಸ್ವಾಗತಿಸಲಾಯಿತು.

ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ‘ನಾವು ಯಾವ ಧರ್ಮದಲ್ಲಿ ಜನ್ಮ ತಾಳಿದ್ದೇವೆಯೋ ಆ ಧರ್ಮದ ಸೇವೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.