
ಪ್ರಜಾವಾಣಿ ವಾರ್ತೆ
ಬಂಧನ
ಕಾರವಾರ: ತಾಲ್ಲೂಕಿನ ಸದಾಶಿವಗಡದ ಲಿಂಕ್ ರಸ್ತೆಯ ಸಮೀಪ ಗಾಂಜಾ ಸೇವನೆಯಲ್ಲಿ ತೊಡಗಿದ್ದ ಆರೋಪದಡಿ ಚಿತ್ತಾಕುಲ ಸೀಬರ್ಡ್ ಕಾಲೊನಿಯ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.
ಸಾಗರ ಅಂಕೋಲೇಕರ (25), ಸಾಗರ ಅಂಬಿಗ (22) ಆರೋಪಿಗಳು. ಇಬ್ಬರು ಗಾಂಜಾ ಸೇವನೆಯಲ್ಲಿ ತೊಡಗಿದ್ದ ವೇಳೆ ವಶಕ್ಕೆ ಪಡೆಯಲಾಯಿತು. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸೇವನೆ ಮಾಡಿದ್ದು ದೃಢಪಟ್ಟಿದೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.