ADVERTISEMENT

ಕಾರವಾರ: ಜಪಾನ್‌ ಪ್ರಶಸ್ತಿಗೆ ವಿಜ್ಞಾನಿ, ಉದ್ಯಮಿ ಶ್ರೀಹರಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 23:53 IST
Last Updated 9 ಡಿಸೆಂಬರ್ 2025, 23:53 IST
ಶ್ರೀಹರಿ ಚಂದ್ರಘಾಟಗಿ
ಶ್ರೀಹರಿ ಚಂದ್ರಘಾಟಗಿ   

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ವಿಜ್ಞಾನಿ ಮತ್ತು ಉದ್ಯಮಿ ಶ್ರೀಹರಿ ಚಂದ್ರಘಾಟಗಿ ಅವರು ಜಪಾನ್‌ನ ಉದ್ಯಮ ತಂತ್ರಜ್ಞಾನದ ‘ಸೂಪರ್ ಮ್ಯಾನುಫ್ಯಾಕ್ಚರ್ಸ್ (ಚೋ ಮೊನೊಡುಜುಕುರಿ)’ ಅತ್ಯುನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಶ್ರೀಹರಿ ಅವರು ಮಾಡಿದ ಉನ್ನತ ಸಾಧನೆಯನ್ನು ಪರಿಗಣಿಸಲಾಗಿದೆ. ಎರಡೂವರೆ ದಶಕಗಳಿಂದ ಟೋಕಿಯೋದಲ್ಲಿ ನೆಲೆಸಿರುವ ಅವರು, ‘ಎಕೋಸೈಕಲ್ ಕಾರ್ಪೊರೇಷನ್’ ಎಂಬ ಸಂಸ್ಥೆ ಸ್ಥಾಪಿಸಿ ಮುನ್ನಡೆಸುತ್ತಿದ್ದಾರೆ. 

ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ ಸೇರಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.