ADVERTISEMENT

ಮಾಜಿ ಶಾಸಕ ಉಮೇಶ ಭಟ್ ನಿಧನ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2019, 19:27 IST
Last Updated 13 ಆಗಸ್ಟ್ 2019, 19:27 IST
ಉಮೇಶ ಭಟ್
ಉಮೇಶ ಭಟ್   

ಶಿರಸಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಉಮೇಶ ಭಟ್ ಭಾವಿಕೇರಿ (72) ಮಂಗಳವಾರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ ಇದ್ದಾರೆ. ಅಂಕೋಲಾ ತಾಲ್ಲೂಕು ಭಾವಿಕೇರಿಯ ಅವರು, ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ (1989–94) ಒಂದು ಅವಧಿಗೆ ಶಾಸಕರಾಗಿದ್ದರು. ಲೋಕ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು, ಹಾಲಿ ಟ್ರಸ್ಟಿಯಾಗಿದ್ದರು. ಯಲ್ಲಾಪುರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಶಿರಸಿಯ ಜನಶಕ್ತಿ ವಿಶ್ವಸ್ಥ ಮಂಡಳಿಯ
ಗೌರವಾಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.