ADVERTISEMENT

ಉತ್ತರ ಕನ್ನಡ | ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿ: ಡಿಸಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 6:06 IST
Last Updated 8 ಫೆಬ್ರುವರಿ 2026, 6:06 IST
ಕೆ.ಲಕ್ಷ್ಮಿಪ್ರಿಯಾ
ಕೆ.ಲಕ್ಷ್ಮಿಪ್ರಿಯಾ   

ಕಾರವಾರ: ‘ಜಿಲ್ಲೆಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನ ಮಂತ್ರಿ ಮಾನ್ ಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆಗೆ ನೋಂದಣಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ (ಪಿಎಂ–ಎಸ್‍ವೈಎಂ) ಯೋಜನೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ ನಡೆಸಿ ಅವರು ಸೂಚನೆ ನೀಡಿದರು.

‘ಯೋಜನೆಯ ಕುರಿತು ಕಾರ್ಮಿಕರಲ್ಲಿ ಅರಿವು ಮೂಡಿಸಬೇಕು. ಮಾರ್ಚ್ 15ರ ವರೆಗೆ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು’ ಎಂದರು.

ADVERTISEMENT

‘ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರು, ಮನರೇಗಾ ಕೂಲಿ ಕಾರ್ಮಿಕರು, ಮನೆ ಕೆಲಸದವರು, ಅಗಸರು, ಕೈಮಗ್ಗ ಕಾರ್ಮಿಕರು ಸೇರಿದಂತೆ ಅಸಂಘಟಿತ ಅರ್ಹ ಕಾರ್ಮಿಕರನ್ನು ಗುರುತಿಸುವ ಕೆಲಸ ಆಗಬೇಕು’ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ, ‘18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಎ.ಎಸ್.ಸಿ ಕೇಂದ್ರಗಳಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪ್ರತಿ ಸಲ್ಲಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ‍’ ಎಂದರು.

ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಪೌರಾಯುಕ್ತ ಜಗದೀಶ ಹುಲಿಗಜ್ಜಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರತೀಕ ಶೆಟ್ಟಿ, ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.