ಕಾರವಾರ: ಹೊನ್ನಾವರ– ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 69ರಲ್ಲಿ, ಗೇರುಸೊಪ್ಪ ಸೂಳೆಮುರ್ಕಿ ತಿರುವಿನಲ್ಲಿ ಆಗಿದ್ದ ಭೂಕುಸಿತವನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ.
ಆದ್ದರಿಂದ ಈ ಮಾರ್ಗದಲ್ಲಿ ಬಸ್‌ಗಳು ಹಾಗೂ ಸಿಂಗಲ್ ಆ್ಯಕ್ಸೆಲ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲ್ ಗುರುವಾರ ಆದೇಶಿಸಿದ್ದಾರೆ. ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಮುಂದುವರಿಸಲಾಗಿದೆ. ಅವು, ಈ ಹಿಂದಿನ ಆದೇಶದಂತೆ ಕುಮಟಾ– ಶಿರಸಿ ಮಾರ್ಗವಾಗಿ ಸಂಚರಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಇಲ್ಲಿ ಜುಲೈ 16ರಂದು ಭೂಕುಸಿತವಾಗಿತ್ತು. ಬಳಿಕ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಜುಲೈ 22ರಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.