ADVERTISEMENT

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 5:06 IST
Last Updated 19 ನವೆಂಬರ್ 2025, 5:06 IST
ದಾಂಡೇಲಿಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಶೀಲ್ದಾರ್ ಶೈಲೇಶ್ ಪರಮಾನಂದ ಬಿಡುಗಡೆ ಗೊಳಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ಹಾಗೂ ಕಸಾಪ ಅಜೀವ ಸದಸ್ಯರು ಇದ್ದರು.
ದಾಂಡೇಲಿಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಶೀಲ್ದಾರ್ ಶೈಲೇಶ್ ಪರಮಾನಂದ ಬಿಡುಗಡೆ ಗೊಳಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ಹಾಗೂ ಕಸಾಪ ಅಜೀವ ಸದಸ್ಯರು ಇದ್ದರು.   

ದಾಂಡೇಲಿ: ಡಿಸೆಂಬರ್ 13 , 14, 15 ರಂದು ದಾಂಡೇಲಿಯಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಕಾರ್ಯಕ್ರಮ ಆಡಳಿತ ಸೌಧದ ಸಭಾಭವನದಲ್ಲಿ ಮಂಗಳವಾರ ನಡೆಯಿತು.

ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ತಹಶೀಲ್ದಾರ್ ಶೈಲೇಶ ಪರಮಾನಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಪ್ರತಿಯೊಂದು ಮನೆ, ಮನಗಳಲ್ಲಿ ನಡೆಯಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ಸಿದ್ಧತಾ ಕಾರ್ಯಗಳು ಭರದಿಂದ ನಡೆಯುತ್ತಿದ್ದು, ಸರ್ವ ಜನತೆ ಸಮ್ಮೇಳನದ ಯಶಸ್ವಿಗಾಗಿ ಸಹಕಾರ ತೋರುತ್ತಿದ್ದಾರೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿ ದಾಖಲಾಗಬೇಕಿದೆ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ ಹಾದಿಮನಿ ಹಾಗೂ ನಗರಸಭೆ ಅಧ್ಯಕ್ಷ ಅಷ್ಪಾಕ್ ಶೇಖ್ ಮಾತನಾಡಿ, 25ನೇ ವರ್ಷದ ಸಾಹಿತ್ಯ ಸಮ್ಮೇಳನ ದಾಂಡೇಲಿ ಗೆ ಆತಿಥ್ಯ ವಹಿಸಲು ಅವಕಾಶ ಸಿಕ್ಕಿದ್ದು ನಮ್ಮೆಲ್ಲರ ಅದೃಷ್ಟವಾಗಿದೆ. ಈಗ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ. ಸಮ್ಮೇಳನ ಯಶಸ್ಸಿಗೆ ಎಲ್ಲರೂ ಸಹಕರಿಸೋಣಾ ಎಂದರು.

ಸಭೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣ ನಾಯ್ಕ, ಕರ್ನಾಟಕ ಸಂಘದ ಉಪಾಧ್ಯಕ್ಷ ರಾಜೇಶ ತಿವಾರಿ, ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಶಿರಸಿ ಅರ್ಬನ್ ಬ್ಯಾಂಕ್ ನಿರ್ದೇಶಕ ಟಿ.ಎಸ್. ಬಾಲ ಮಣಿ, ಕಲಾಶ್ರೀ ಸಂಸ್ಥೆಯ ಅಧ್ಯಕ್ಷ ಎಸ್. ಪ್ರಕಾಶ್ ಶೆಟ್ಟಿ, ಕಸಾಪ ಕೋಶಾಧ್ಯಕ್ಷ ಶ್ರೀಮಂತ ಮದರಿ, ಪದಾಧಿಕಾರಿಗಳಾದ ಕಲ್ಪನಾ ಪಾಟೀಲ, ಸುರೇಶ್ ಕಾಮತ್, ವೆಂಕಮ್ಮ ನಾಯಕ, ಸುರೇಶ ಪಾಲನಕರ, ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ಆರ್. ಪಿ. ನಾಯ್ಕ ,ರೋಟರಿ ಕ್ಲಬ್ ಅಧ್ಯಕ್ಷ ಅಶೋತೋಷಕುಮಾರ ರಾಯ, ಸುಧಾಕರ ಶೆಟ್ಟಿ ಹಾಗೂ ಕಸಾಪ ಅಜೀವ ಸದಸ್ಯರು ಇದ್ದರು.

ಜಿಲ್ಲೆಯ ಹಿರಿಮೆಯನ್ನೊಳಗೊಂಡ ಲಾಂಛನ: ಕಲಾವಿದ ಮಹೇಶ ಪತ್ತಾರ ಸಿದ್ದಪಡಿಸಿದ ಲಾಂಛನವು ಅಭಯಾರಣ್ಯ, ಕಾಗದ ಕಂಪನಿ, ಹಾರ್ನಬಿಲ್ , ಹುಲಿ, ಕಾಳಿನದಿ, ರಾಫ್ಟಿಂಗ್‌, ಜಿಲ್ಲೆಯ ಹೆಮ್ಮೆಯ ಕಲೆ ಯಕ್ಷಗಾನ, ಜಲಪಾತ ಸೇರಿದಂತೆ ಸಾಂಸ್ಕೃತಿಕ ಪ್ರಾಕೃತಿಕ ಭೌಗೋಳಿಕ ಸೊಬಗನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.