ADVERTISEMENT

ಕಾರವಾರ: ಸಮುದ್ರಕ್ಕೆ ಪೂಜೆ ಸಲ್ಲಿಸಿದ BJP ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 5:01 IST
Last Updated 12 ಏಪ್ರಿಲ್ 2024, 5:01 IST
<div class="paragraphs"><p>ನಾಮಪತ್ರ ಸಲ್ಲಿಕೆಗೆ ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅರಬ್ಬಿ ಸಮುದ್ರಕ್ಕೆ ಪೂಜೆ ಸಲ್ಲಿಸಿದ&nbsp;ವಿಶ್ವೇಶ್ವರ ಹೆಗಡೆ ಕಾಗೇರಿ</p></div>

ನಾಮಪತ್ರ ಸಲ್ಲಿಕೆಗೆ ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅರಬ್ಬಿ ಸಮುದ್ರಕ್ಕೆ ಪೂಜೆ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

   

ಕಾರವಾರ: ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿನ ಟ್ಯಾಗೋರ್ ಕಡಲತೀರದಲ್ಲಿ ಶುಕ್ರವಾರ ಸಮುದ್ರಕ್ಕೆ ಪೂಜೆ ಸಲ್ಲಿಸಿದರು‌.

ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅರಬ್ಬಿ ಸಮುದ್ರಕ್ಕೆ ಪೂಜೆ ಸಲ್ಲಿಸಿದರು.

ADVERTISEMENT

ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಬಿಜೆಪಿ ಶಕ್ತಿಶಾಲಿಯಾಗಿದೆ. ಕಾರ್ಯಕರ್ತರ ಪಡೆ ಗಟ್ಟಿಯಾಗಿದೆ. ಕಾಂಗ್ರೆಸ್ ಜನರಿಗೆ ಆಮಿಷವೊಡ್ಡುವ ಸಾಧ್ಯತೆ ಇದೆ. ಮತದಾರರು ಎಚ್ಚರದಿಂದ ಇರಬೇಕು' ಎಂದರು.

'ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದಾರೆ. ಅವರ ನಡವಳಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ಧವಾಗಿರುವಂತೆ ಕಾಣಿಸುತ್ತಿದೆ. ನೈತಿಕವಾಗಿ ಅವರು ದಿವಾಳಿಯಾದಂತಿದೆ' ಎಂದು ಶಾಸಕ ಹೆಬ್ಬಾರ್ ನಿರ್ಲಿಪ್ತತೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಶಾಸಕ ಅರವಿಂದ ಬೆಲ್ಲದ, ಮುಖಂಡರಾದ ಹರತಾಳು ಹಾಲಪ್ಪ, ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.