ADVERTISEMENT

ವಾಯುವ್ಯ ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಲ್ಲಿ ಅಪ್ರೆಂಟಿಸ್‌ಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 5:42 IST
Last Updated 24 ಆಗಸ್ಟ್ 2025, 5:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕಾರವಾರ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಲ್ಲಿ ವಿವಿಧ ತರಬೇತಿ ಪಡೆಯಲು ಅಪ್ರೆಂಟಿಸ್‌ಗೆ (ಪ್ರಾಯೋಗಿಕ ತರಬೇತಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡೀಸೆಲ್ ಮೆಕಾನಿಕ್, ಆಟೊಎಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ಡರ್, ಟರ್ನರ್, ಮೋಟರ್ ವೆಹಿಕಲ್ ಬಾಡಿ ಬಿಲ್ಡರ್ ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ವೃತ್ತಿಗಳಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸೆ.4ರಂದು ಶಿರಸಿಯಲ್ಲಿರುವ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಇದ್ದು, ಅಲ್ಲಿಯೇ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ADVERTISEMENT

ಅಗತ್ಯ ಮಾಹಿತಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ (7760991703) ಸಂಪರ್ಕಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.