ಪ್ರಾತಿನಿಧಿಕ ಚಿತ್ರ
ಕಾರವಾರ: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯ ವ್ಯಾಪ್ತಿಯಲ್ಲಿ ಅ. 25ರವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
‘ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆ ಇದೆ. ಜೊತೆಗೆ ರಭಸದಿಂದ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಅಪಾಯಕಾರಿ ಮರಗಳಿರುವ ಪ್ರದೇಶ, ಶಿಥಿಲ ಕಟ್ಟಡದಲ್ಲಿ ವಾಸವಿರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಎಚ್ಚರಿಸಿದ್ದಾರೆ.
‘ಇನ್ನೂ ಎರಡು ದಿನ ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ಕಡಲತೀರ ಪ್ರದೇಶಗಳಿಗೆ ಹೋಗಬಾರದು, ನದಿಗೆ ಇಳಿಯಬಾರದು. ತುರ್ತು ಸೇವೆಗೆ ಜಿಲ್ಲಾಡಳಿತದ ಕಂಟ್ರೋಲ್ ರೂಮ್ (08382 229857) ಅಥವಾ ವಾಟ್ಸ್ಆ್ಯಪ್ ಸಂಖ್ಯೆ 9483511015 ಸಂಪರ್ಕಿಸಿ’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.