ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ‘ದಲಿತ ಸಾಹಿತ್ಯ:ಅರ್ಧ ಶತಮಾನ’ ಎಂಬ ಹೆಸರಿನಲ್ಲಿ ಮೂರು ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಿದ್ದು, ಶಿಬಿರದಲ್ಲಿ ಪಾಲ್ಗೊಳ್ಳ ಬಯಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
20 ರಿಂದ ರಿಂದ 50 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಮತ್ತು ಅಗತ್ಯ ಮಾಹಿತಿಗೆ ಅಕಾಡೆಮಿ ವೆಬ್‌ಸೈಟ್ https://sahityaacademy.karnataka.gov.in ನಿಂದ ಪಡೆಯಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.