ಹೊನ್ನಾವರ: ಮಾದಕದ್ರವ್ಯ ಸೇವನೆ ವ್ಯಸನ, ಸಾಮಾಜಿಕ ಮಾಧ್ಯಮದ ಗೀಳು ಮೊದಲಾದ ಕಾರಣಗಳಿಂದ ಯುವಕರು ಅಪರಾಧ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಅಪಾಯವಿದ್ದು ಈ ಕುರಿತಂತೆ ಪೊಲೀಸ್ ಇಲಾಖೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪಿಎಸ್ಐ ಮಂಜುನಾಥ ತಿಳಿಸಿದರು.
ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಹೊನ್ನಾವರ ಪೊಲೀಸ್ ಠಾಣೆ ಸಹಯೋಗದಲ್ಲಿ ಇಲ್ಲಿನ ಎಸ್‌ಡಿಎಂ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಣ ಉಳಿತಾಯ ಸೇರಿದಂತೆ ಆರ್ಥಿಕ ಶಿಸ್ತಿನ ಪಾಠ, ಪಾಲಕರ ಜೊತೆಗಿನ ಭಾವನಾತ್ಮಕ ಸಂಬಂಧ, ವೃತ್ತಿ ಜೀವನದ ಯಶಸ್ಸನ್ನು ಪ್ರೇರೇಪಿಸುವ ಪುಸ್ತಕದ ಓದು ಮತ್ತು ಸಿನಿಮಾ ವೀಕ್ಷಣೆ ಮೊದಲಾದ ಉತ್ತಮ ಹವ್ಯಾಸಗಳು ವಿದ್ಯಾರ್ಥಿಗಳು ಬದುಕಿನಲ್ಲಿ ಸರಿಯಾದ ದಾರಿಯಲ್ಲಿ ಸಾಗುವಂತೆ ಮಾಡುತ್ತವೆ ಎಂದು ಅವರು ಹೇಳಿದರು.
ವಿದ್ಯಾರ್ಥಿ ಕಾರ್ಯದರ್ಶಿ ಅಜಯ್ ಗೌಡ ಭಾಗವಹಿಸಿದ್ದರು. ಪ್ರಾಧ್ಯಾಪಕ ಎಂ.ಜಿ.ಹೆಗಡೆ ಸ್ವಾಗತಿಸಿದರು. ಉಪನ್ಯಾಸಕ ಪ್ರಶಾಂತ ಹೆಗಡೆ ಮೂಡಲಮನೆ ವಂದಿಸಿದರು.
ವಿದ್ಯಾರ್ಥಿಗಳು ವರ್ತಮಾನದಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದುಡಿ.ಎಲ್.ಹೆಬ್ಬಾರ ಪ್ರಾಚಾರ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.