ADVERTISEMENT

ಕಾರವಾರ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ.ಗೆ ವೀರೇಂದ್ರ ಹೆಗ್ಗಡೆ ಪತ್ರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 15:55 IST
Last Updated 5 ಸೆಪ್ಟೆಂಬರ್ 2022, 15:55 IST
ವೀರೇಂದ್ರ ಹೆಗ್ಗಡೆ
ವೀರೇಂದ್ರ ಹೆಗ್ಗಡೆ   

ಕಾರವಾರ: ‘ಉತ್ತರ ಕನ್ನಡದಲ್ಲಿ ಒಂದು ಸುಸಜ್ಜಿತವಾದ, ಮಲ್ಟಿ ಸ್ಪೆಷಾಲಿಟಿ ಸೌಲಭ್ಯಗಳಿರುವ ಆಸ್ಪತ್ರೆಯನ್ನು ನಿರ್ಮಿಸಬೇಕು’ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಜಿಲ್ಲೆಯ ಆದೇಶ ಚಂದ್ರರಾಜ್ ಗಾಂವ್ಕರ್ ಎಂಬುವವರು ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ವೀರೇಂದ್ರ ಹೆಗ್ಗಡೆ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಇದಕ್ಕೆ ಸ್ಪಂದಿಸಿದ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

‘ಉತ್ತರ ಕನ್ನಡದಲ್ಲಿ ಮಲ್ಟಿಸ್ಪೆಷಾಲಿಟಿ ಸೌಲಭ್ಯಗಳಿರುವ ಒಂದೂ ಆಸ್ಪತ್ರೆಯಿಲ್ಲ. ಆರೋಗ್ಯದ ತುರ್ತು ಸಂದರ್ಭದಲ್ಲಿ ಸ್ಥಳೀಯರು ಪರಿತಪಿಸುವಂತಾಗಿದೆ. ತುರ್ತು ಚಿಕಿತ್ಸೆಗಾಗಿ ಜನ ಮಣಿಪಾಲ, ಗೋವಾ, ಹುಬ್ಬಳ್ಳಿ ಮೊದಲಾದ ಊರುಗಳಿಗೆ ಹೋಗಬೇಕಿದೆ. ಇಲ್ಲಿನ ಜನರಿಗೆ ಸ್ಥಳೀಯವಾಗಿಯೇ ಸಕಲ ವೈದ್ಯಕೀಯ ಸೌಲಭ್ಯಗಳು ಸಿಗುವಂತೆ ಅನುವು ಮಾಡಿಕೊಡಬೇಕು. ಇದರಿಂದ ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿ ಸುಖೀ ಜೀವನ ನಡೆಸಲು ಅನುಕೂಲವಾಗುತ್ತದೆ’ ಎಂದು ಹೆಗ್ಗಡೆ ಅವರು ಪತ್ರದಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.