ADVERTISEMENT

ಉತ್ತರ ಕನ್ನಡ: ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 6:37 IST
Last Updated 23 ನವೆಂಬರ್ 2021, 6:37 IST
ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಸಿದರು.
ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಸಿದರು.   

ಕಾರವಾರ: ವಿಧಾನಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ನಗರದ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅವರು ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ಉಪಾಧ್ಯಕ್ಷ ಗೋವಿಂದ ನಾಯ್ಕ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

ಕಳೆದ ಬಾರಿಯೂ ಸ್ಪರ್ಧಿಸಿದ್ದ ಉಳ್ವೇಕರ್, ಕಾಂಗ್ರೆಸ್‌ನ ಶ್ರೀಕಾಂತ ಘೊಟ್ನೇಕರ್ ವಿರುದ್ಧ ಪರಾಭವಗೊಂಡಿದ್ದರು. ಅವರೀಗ ಎರಡನೇ ಬಾರಿಗೆ ಸ್ಪರ್ಧೆಯಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.