ADVERTISEMENT

ಕಾರವಾರ: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮಣ್ಣ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 7:38 IST
Last Updated 23 ನವೆಂಬರ್ 2021, 7:38 IST
ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮಣ್ಣ ನಾಯ್ಕ ಅವರು ನಾಮಪತ್ರ ಸಲ್ಲಿಸಿದರು.
ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮಣ್ಣ ನಾಯ್ಕ ಅವರು ನಾಮಪತ್ರ ಸಲ್ಲಿಸಿದರು.   

ಕಾರವಾರ: ವಿಧಾನಪರಿಷತ್‌ ಚುನಾವಣೆಗೆ ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವಾಗ ಅವರೊಂದಿಗೆ ಪಕ್ಷದ ಮುಖಂಡರಾದ ಮಧು ಬಂಗಾರಪ್ಪ, ಸತೀಶ ಸೈಲ್, ಶಾರದಾ ಶೆಟ್ಟಿ, ಮಂಕಾಳ ವೈದ್ಯ ಇದ್ದರು.

ಮಿತ್ರ ಸಮಾಜದಿಂದ ಪಾದಯಾತ್ರೆಯಲ್ಲಿ ಬರುವಾಗ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.