ADVERTISEMENT

ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ: ಅಬಕಾರಿ ಉಪ ಅಧೀಕ್ಷಕರಿಗೆ ಆಗ್ರಹ

ಅಣಲೆಬೈಲ್ ಭಾಗದ ಜನರಿಂದ ಅಬಕಾರಿ ಉಪ ಅಧೀಕ್ಷಕರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 16:36 IST
Last Updated 11 ಜನವರಿ 2022, 16:36 IST
ಸಿದ್ದಾಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಅಲ್ಲಿನ ಗ್ರಾಮೀಣ ಭಾಗದ ನಿವಾಸಿಗಳು ಮಂಗಳವಾರ ಅಬಕಾರಿ ಉಪ ಅಧೀಕ್ಷಕ ಮಹೇಂದ್ರ ನಾಯ್ಕ ಅವರಿಗೆ ಮನವಿ ಮಾಡಿದರು
ಸಿದ್ದಾಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಅಲ್ಲಿನ ಗ್ರಾಮೀಣ ಭಾಗದ ನಿವಾಸಿಗಳು ಮಂಗಳವಾರ ಅಬಕಾರಿ ಉಪ ಅಧೀಕ್ಷಕ ಮಹೇಂದ್ರ ನಾಯ್ಕ ಅವರಿಗೆ ಮನವಿ ಮಾಡಿದರು   

ಶಿರಸಿ: ಸಿದ್ದಾಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಅಲ್ಲಿನ ಗ್ರಾಮೀಣ ಭಾಗದ ನಿವಾಸಿಗಳು ಮಂಗಳವಾರ ಅಬಕಾರಿ ಉಪ ಅಧೀಕ್ಷಕ ಮಹೇಂದ್ರ ನಾಯ್ಕ ಅವರಿಗೆ ಮನವಿ ಮಾಡಿದರು.

‘ಗ್ರಾಮೀಣ ಭಾಗದ ಕೆಲವು ಗೂಡಂಗಡಿ, ಹೋಟೆಲ್‍ಗಳು, ಮನೆಗಳಲ್ಲಿಯೂ ಮದ್ಯ ಮಾರಾಟ ಮಾಡಲಾಗುತ್ತಿದೆ. ಕಾರ್ಮಿಕರು, ಯುವಕರು ಮದ್ಯ ಸೇವನೆ ವ್ಯಸನಕ್ಕೆ ಅಂಟಿಕೊಳ್ಳುತ್ತಿದ್ದಾರೆ. ಇದರಿಂದ ಕೌಟುಂಬಿಕ ಕಲಹಗಳು ಹೆಚ್ಚುತ್ತಿದೆ’ ಎಂದು ಸಮಸ್ಯೆ ವಿವರಿಸಿದರು.

‘ಮದ್ಯ ಮಾರಾಟ ಅಕ್ರಮವಾಗಿ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಕ್ರಮಕೈಗೊಳ್ಳುತ್ತಿಲ್ಲ. ದೂರು ನೀಡಿದರೂ ದಾಳಿಗಳನ್ನು ನಡೆಸುತ್ತಿಲ್ಲ. ಇದು ಮದ್ಯ ಮಾರಾಟಗಾರರಿಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಂತಾಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಮದ್ಯ ಅಕ್ರಮ ಮಾರಾಟ ದಂಧೆಗೆ ಕಡಿವಾಣ ಹಾಕದೆ ಇಲಾಖೆ ನಿರ್ಲಕ್ಷ್ಯ ಇದೇ ರೀತಿ ಮುಂದುವರಿದರೆ ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ಹೆಗ್ಗರಣೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಜಾರಾಮ ಹೆಗಡೆ ಬೆಳೆಕಲ್, ಸರೋಜಾ ನಾಯ್ಕ, ಶೋಭಾ ಭೋವಿವಡ್ಡರ್, ಲೀಲಾವತಿ ಹೆಗಡೆ, ಮಂಜುನಾಥ ನಾಯ್ಕ, ಕರುಣಾಕರ ಹೆಗಡೆ, ಈರ ಗೌಡ, ಮಂಗಲಾ ಮುಕ್ರಿ, ಶಾರದಾ ಹೆಗಡೆ, ಲೋಕೇಶ್ ಮಡಿವಾಳ, ಹರೀಶ ಮಡಿವಾಳ, ಶ್ರೀಕಾಂತ ನಾಯ್ಕ, ಮಂಜುನಾಥ ಬಡಗಿ, ಗೌರಿ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.