ADVERTISEMENT

ಸರ್ಕಾರ ಶೀಘ್ರ ಮೀಸಲಾತಿ ಪ್ರಕಟಿಸಲಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 12:17 IST
Last Updated 14 ಜನವರಿ 2020, 12:17 IST
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ   

ಶಿರಸಿ: ಪ್ರಜಾಪ್ರಭುತ್ವದ ಆಶಯ ಅರ್ಥೈಸಿಕೊಂಡು ನಗರ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳಿಗೆ ಅಧಿಕಾರ ನೀಡಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಗರ ಸ್ಥಳೀಯ ಸಂಸ್ಥೆಗಳಿಗೆ ಜನಪ್ರತಿನಿಧಿಗಳು ಆಯ್ಕೆಯಾಗಿ 15 ತಿಂಗಳುಗಳು ಕಳೆದವು. ಆದರೆ, ಅವರಿಗೆ ಇನ್ನೂ ಅಧಿಕಾರ ದೊರೆತಿಲ್ಲ. ಅಧಿಕಾರ ಸಿಗದೇ ಜನಪ್ರತಿನಿಧಿಗಳು ಅಭಿವೃದ್ಧಿ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ವಾರ್ಡ್ ನಿವಾಸಿಗಳಿಂದ ಮನಸ್ಸಿಗೆ ಬಂದಂತೆ ಹೇಳಿಸಿಕೊಳ್ಳುವ ಪರಿಸ್ಥಿತಿ ನಗರಸಭೆಗೆ ಆಯ್ಕೆಯಾಗಿರುವ ಸದಸ್ಯರಿಗೆ ಬಂದಿದೆ’ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿಚಾರವನ್ನು ನ್ಯಾಯಾಲಯವು ಸರ್ಕಾರಕ್ಕೆ ನೀಡಿದೆ. ಮೀಸಲಾತಿ ವಿಚಾರದ ಕಾರಣಕ್ಕೆ ಈವರೆಗಿನ ಅಭಿವೃದ್ಧಿ ಕುಂಠಿತವಾಗಿದೆ. ಇನ್ನಾದರೂ, ಸರ್ಕಾರ ಮೀಸಲಾತಿ ಪಟ್ಟಿಯನ್ನು ಶೀಘ್ರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಶ್ರೀಕಾಂತ ತಾರೀಬಾಗಿಲು, ದೀಪಾ ಮಹಾಲಿಂಗಣ್ಣನವರ್, ಸುಮಿತ್ರಾ ಗಾಂವಕರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.