ADVERTISEMENT

ಸಹಕಾರಿ ಧುರೀಣ ವಿ.ಎಸ್.ಸೋಂದೆ ನಿಧನ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 7:59 IST
Last Updated 12 ಅಕ್ಟೋಬರ್ 2020, 7:59 IST
ವಿ.ಎಸ್.ಸೋಂದೆ
ವಿ.ಎಸ್.ಸೋಂದೆ   

ಶಿರಸಿ: ಸಹಕಾರಿ ಧುರೀಣ ವಿ.ಎಸ್.ಸೋಂದೆ (90) ವಯೋಸಹಜ ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಶಿರಸಿ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ 32 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಮಾಡರ್ನ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿಯೂ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಇತಿಹಾಸದ ಸಂಶೋಧನೆ ಕುರಿತು ಆಸಕ್ತಿ ಹೊಂದಿದ್ದ ಅವರು ಅನೇಕ ಲೇಖನ ಬರೆದಿದ್ದರು. ಸಾಮಾಜಿಕ ಚಟುವಟಿಕೆಯಲ್ಲಿಯೂ ಸದಾ ಮುಂಚೂಣಿಯಲ್ಲಿದ್ದರು. 1996ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಮೃತರಿಗೆ ನಾಲ್ವರು ಪುತ್ರಿಯರು, ಒಬ್ಬ ಸಹೋದರ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.