ADVERTISEMENT

ಸಾಮಾಜಿಕ ಜಾಲತಾಣದ ಮೇಲೆ ನಿಗಾ: ಎಡಿಜಿಪಿ ಅಲೋಕ್ ಕುಮಾರ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 16:08 IST
Last Updated 6 ಏಪ್ರಿಲ್ 2023, 16:08 IST
ಅಲೋಕ್ ಕುಮಾರ್
ಅಲೋಕ್ ಕುಮಾರ್   

ಕಾರವಾರ: ‘ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ನಡೆಸುವವರ ಮೇಲೆ ನಿಗಾ ಇಡಲಾಗುವುದು. ಸಂತ್ರಸ್ತರು ದೂರು ನೀಡಿದರೆ ಕಠಿಣ ಕ್ರಮ ಜರುಗಿಸುತ್ತೇವೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ. ಅಲೋಕ್ ಕುಮಾರ್ ಹೇಳಿದರು.

ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.

‘280ಕ್ಕೂ ಹೆಚ್ಚು ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿ.ಆರ್.ಪಿ.ಎಫ್ ಸಿಬ್ಬಂದಿ ನಿಯೋಜಿಸಲಾಗುವುದು. 33 ಜನ ರೌಡಿ ಶೀಟರ್‍ ಗಳಿನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಾಗಿದ್ದು, ಇಬ್ಬರ ವಿರುದ್ಧ ಈಗಾಗಲೆ ಕ್ರಮ ಜರುಗಿಸಲಾಗಿದೆ’ ಎಂದರು.

ADVERTISEMENT

‘ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ಬಿಗುಗೊಳಿಸಲಾಗಿದೆ. ಉಡುಗೊರೆ, ಮದ್ಯ, ಹಣ ಸಾಗಾಟದ ಬಗ್ಗೆ ಹೆಚ್ಚು ನಿಗಾ ಇಡಲಾಗಿದೆ’ ಎಂದರು.

ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.