ADVERTISEMENT

ಕಾರವಾರ | ಕಡಲಿನಲ್ಲಿ ಅಲೆಗಳ ಅಬ್ಬರ: ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 7:14 IST
Last Updated 6 ಆಗಸ್ಟ್ 2020, 7:14 IST
ಶಿರಸಿ ಸಮೀಪ ವರದಾ ನದಿಯ ಪ್ರವಾಹದಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ
ಶಿರಸಿ ಸಮೀಪ ವರದಾ ನದಿಯ ಪ್ರವಾಹದಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ   
""

ಕಾರವಾರ: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ರಭಸದ ಗಾಳಿ ಮುಂದುವರಿದಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಶಿರಸಿಯಲ್ಲಿ ವರದಾ ನದಿಯ ಪ್ರವಾಹದಿಂದ 500ಕ್ಕೂ ಹೆಚ್ಚು ಎಕರೆ ಅಡಿಕೆ, ಭತ್ತದ ಕೃಷಿಭೂಮಿ ಜಲಾವೃತವಾಗಿದೆ.

ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ 58 ಸಾವಿರ ಕ್ಯುಸೆಕ್ ಒಳ ಹರಿವಿದ್ದು, ಅದೇ ಪ್ರಮಾಣದಲ್ಲಿ ಕ್ರೆಸ್ಟ್‌ಗೇಟ್‌ಗಳ ಮೂಲಕ ಕಾಳಿ ನದಿಗೆ ನೀರು ಹರಿಸಲಾಗುತ್ತಿದೆ.

ADVERTISEMENT
ಕದ್ರಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.