ಯಲ್ಲಾಪುರ: ʻಪರಿಸರ ರಕ್ಷಿಸುವಲ್ಲಿ ಪ್ಲಾಸ್ಟಿಕ್ ಅತ್ಯಂತ ಅಪಾಯಕಾರಿ ಸಮಸ್ಯೆ ತಂದೊಡ್ಡುತ್ತಿದ್ದು ನಾವು ಅದನ್ನು ತಿರಸ್ಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕುʼ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು ಹೇಳಿದರು.
ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಉದ್ಯಾನವನದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.
ಪ್ಲಾಸ್ಟಿಕ್ ತಿರಸ್ಕರಿಸಿ ನಿಸರ್ಗ ಸಂಪತ್ತನ್ನು ಬೆಳೆಸಬೇಕಿದೆ. ವಿಶ್ವ ಪರಿಸರ ದಿನದಂದು ನಾವೆಲ್ಲ ಅರಣ್ಯ ಸಂಪತ್ತನ್ನು ರಕ್ಷಿಸುವ ಸಂಕಲ್ಪ ಮಾಡಬೇಕಿದೆ. ಹಿರಿಯರು ನಮಗೆ ನೀಡಿದ ಈ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕಿದೆʼ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನರ್ಮದಾ ರವೀಂದ್ರ ನಾಯ್ಕ, ಎಸಿಎಫ್‌ಗಳಾದ ಹಿಮವತಿ ಭಟ್, ಸಂಗಮೇಶ ಪ್ರಭಾಕರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.