ADVERTISEMENT

ಒಂದೂವರೆ ವರ್ಷದಲ್ಲಿ ಸುಸಜ್ಜಿತ ಆಸ್ಪತ್ರೆ:ಕಾಗೇರಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2022, 15:57 IST
Last Updated 3 ಏಪ್ರಿಲ್ 2022, 15:57 IST
ಶಿರಸಿಯ ಪಂಡಿತ ಆಸ್ಪತ್ರೆ ಹೊಸ ಕಟ್ಟಡ ಕಾಮಗಾರಿಗೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಭೂಮಿಪೂಜೆ ನೆರವೇರಿಸಿದರು.
ಶಿರಸಿಯ ಪಂಡಿತ ಆಸ್ಪತ್ರೆ ಹೊಸ ಕಟ್ಟಡ ಕಾಮಗಾರಿಗೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಭೂಮಿಪೂಜೆ ನೆರವೇರಿಸಿದರು.   

ಶಿರಸಿ: ಪಂಡಿತ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿದ್ದು ಮುಂದಿನ ಒಂದೂವರೆ ವರ್ಷದಲ್ಲಿ ಸುಸಜ್ಜಿತ ಆಸ್ಪತ್ರೆ ಜನರ ಸೇವೆಗೆ ಸಿದ್ಧಗೊಳ್ಳಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

₹178 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಇಲ್ಲಿನ ಪಂಡಿತ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಆರೋಗ್ಯ ಕ್ಷೇತ್ರ ಬಲವರ್ಧನೆಗೊಳಿಸಲು ಆದ್ಯತೆ ನೀಡಲಾಗುತ್ತಿದೆ. ಬಡವರು ಚಿಕಿತ್ಸೆಗೆ ದೂರದ ಖಸಗಿ ಆಸ್ಪತ್ರೆಗಳ ಮೊರೆಹೋಗುವುದು ತಪ್ಪಲಿದೆ’ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸ್ಥಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ್, ಸದಸ್ಯ ಪ್ರದೀಪ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಉಪವಿಭಾಗಾಧಿಕಾರಿ ದೇವರಾಜ ಆರ್., ಪೌರಾಯುಕ್ತ ಕೇಶವ ಚೌಗುಲೆ, ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.