ಅಂಕೋಲಾ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಕೇಂದ್ರದಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಅಧಿಕಾರಗಳು ಮತ್ತು ಪೊಲೀಸರು ಚುನಾವಣೆ ಕೇಂದ್ರದ ನೂರು ಮೀಟರ್ ಅಂತರದ ಒಳಗೆ ನಿಲ್ಲದಂತೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಆದರೆ, ಶಾಸಕಿ ರೂಪಾಲಿ ನಾಯ್ಕ ಮತ್ತು ಅವರ ಬೆಂಬಲಿಗರು ಗುಂಪು ಗುಂಪಾಗಿ ಚುನಾವಣೆ ಕೇಂದ್ರದ ಆವರಣಕ್ಕೆ ಬಂದರೂ ಏನೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸ್ಥಳದಲ್ಲಿದ್ದ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಗಾಂವ್ಕರ್, ಶಾಸಕಿ ರೂಪಾಲಿ ನಾಯ್ಕ, ಅಧಿಕಾರಿಗಳ ನಡುವೆ ನಡುವೆ ಮಾತಿನ ಚಕಮಕಿಯೂ ನಡೆಯಿತು. ಸ್ಥಳಕ್ಕೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಅಜಿತ್ ಪರಿಸ್ಥಿತಿ ತಿಳಿಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.