ದಾಂಡೇಲಿ: ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸ್ವಾವಲಂಬಿಯಾಗಿ, ಆರ್ಥಿಕವಾಗಿ ಸದೃಢರಾಗುತ್ತಿರುವುದು ಕಂಡು ಬರುತ್ತಿದೆ. ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಿದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕಾನೂನು ಅರಿವೂ ಹೊಂದಬೇಕಿದೆ’ ಎಂದು ನ್ಯಾಯಾಧೀಶೆ ರೋಹಿಣಿ ಬಸಾಪುರ ಹೇಳಿದರು.
ನಗರದ ಸಿವಿಲ್ ಹಾಗೂ ಜೆ.ಎಂ.ಎಫ್ ಸಿ. ನ್ಯಾಯಾಲಯದಲ್ಲಿ ವಕೀಲರ ಸಂಘ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆದ ವಿಶ್ವ ಮಹಿಳಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಕುಲಕರ್ಣಿ ಮಾತನಾಡಿ, ‘ಮಹಿಳೆಯರನ್ನು ಸಮಾನವಾಗಿ ಹಾಗೂ ಗೌರವಯುತವಾಗಿ ನೋಡಿಕೊಳ್ಳಬೇಕೆಂಬುದೇ ಮಹಿಳಾ ದಿನಾಚರಣೆಯ ಉದ್ದೇಶವಾಗಿದೆ. ಇಡೀ ಸಮಾಜವನ್ನು ಬದಲಾಯಿಸಬಲ್ಲ ಶಕ್ತಿ ಮಹಿಳೆಯರಿಗೆ ಇದೆ’ ಎಂದು ಅವರು ಹೇಳಿದರು.
ಹಿರಿಯ ನ್ಯಾಯವಾದಿ ಎಸ್.ಎಂ. ದಬಗಾರ, ವಕೀಲರ ಸಂಘದ ಕಾರ್ಯದರ್ಶಿ ಐ.ಸಿ. ನಾಯ್ಕ, ಸಿವಿಲ್ ನ್ಯಾಯಾಲಯದ ಶಿರಸ್ತೇದಾರ ಮಹಾದೇವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.