
ಪ್ರಜಾವಾಣಿ ವಾರ್ತೆ
ಅಂಕೋಲಾ: ಪಟ್ಟಣದ ಕೋಟೆವಾಡಾದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಚಿನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ವಾಯುವಿಹಾರಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ವಪ್ನಾ ಹೋಟೆಲ್ ಹಿಂಭಾಗದ ನಿವಾಸಿ ಲಕ್ಷ್ಮಿ ಗೋವಿಂದ ನಾಯಕ (65) ಮೃತರು. ‘ಹೆದ್ದಾರಿಯ ಅಂಚಿನ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಮಟಾ ಕಡೆಯಿಂದ ಕಾರವಾರದ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಪಕ್ಕದ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ವಾಹನ ಚಲಾಯಿಸಿ ಅಪಘಾತ ಉಂಟುಮಾಡಿ ಆರೋಪದಡಿ ಚಾಲಕ ಕಾರವಾರದ ಮಯೂರ್ ಮದನ ಅರ್ಗೇಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.