ADVERTISEMENT

ಉತ್ತರ ಕನ್ನಡ: ಮಂಗನಕಾಯಿಲೆಯಿಂದ ಸಿದ್ದಾಪುರ ಬಳಿ ಮತ್ತೊಬ್ಬ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 10:04 IST
Last Updated 26 ಫೆಬ್ರುವರಿ 2024, 10:04 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸಿದ್ದಾಪುರ: ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಎರಡನೇ ಬಲಿಯಾಗಿದೆ.

ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60 ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ADVERTISEMENT

'ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಮೆಗ್ಗಾನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಮೆಗ್ಗಾನ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು' ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಂತಾಗಿದೆ.

ಈವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.