ಹಳಿಯಾಳ: ರಾಷ್ಟ್ರಮಟ್ಟದ ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಹಳಿಯಾಳ ಕ್ರೀಡಾ ವಸತಿ ನಿಲಯದ ಲಕ್ಷ್ಮಿ ಸಂಜಯ ಪಾಟೀಲ 65 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಏ. 20 ಮತ್ತು 21ರಂದು ರಾಜಸ್ಥಾನದ ಕೋಟಾದಲ್ಲಿ ನಡೆದ 20 ವರ್ಷದೊಳಗಿನ ರಾಷ್ಟ್ರಮಟ್ಟದ ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ಲಕ್ಷ್ಮೀ ಪಾಟೀಲ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ರವಿ ನಾಯಕ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.