ADVERTISEMENT

ವಿಪತ್ತು ನಿರ್ವಹಣೆ ಮಾಹಿತಿಗೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಮೇ 2019, 13:47 IST
Last Updated 14 ಮೇ 2019, 13:47 IST
ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಾಗಾರದ ಮಂಗಳವಾರದ ತರಬೇತಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ ಸಾಲಿ ಉಪನ್ಯಾಸ ನೀಡಿದರು
ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಾಗಾರದ ಮಂಗಳವಾರದ ತರಬೇತಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ ಸಾಲಿ ಉಪನ್ಯಾಸ ನೀಡಿದರು   

ಕಾರವಾರ:ವಿಕೋಪ ನಿಯಂತ್ರಣ ಮತ್ತು ಅದಕ್ಕೆ ಸ್ಪಂದನೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ, ವಿಕೋಪ ಮಿತಗೊಳಿಸುವಿಕೆ, ಅವುಗಳ ಸಂಬಂಧ ಪೂರ್ವ ಸಿದ್ಧತೆ ಮತ್ತು ಸ್ಪಂದನೆಯೋಜನೆಗಳ ಬಗ್ಗೆ ಮಾಹಿತಿ ವಿನಿಮಯ ನಡೆಯಲಿದೆ.ಜಿಲ್ಲಾಡಳಿತ, ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಮೈಸೂರಿನಆಡಳಿತ ತರಬೇತಿ ಸಂಸ್ಥೆಯಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿದೆ.

ಮೊದಲ ದಿನದ ತರಬೇತಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ ಸಾಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅಗ್ನಿ ಶಾಮಕ ಸುರಕ್ಷತಾ ನಿರ್ವಹಣೆ, ಅಗ್ನಿ ನಂದಿಸುವ ವಿಧಗಳ ಕುರಿತು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ವಿನೋದ ಭೂತೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ಯೋಜನೆ ಮತ್ತು ಸಾಮೂಹಿಕ ಅಪಘಾತ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕ ಅಲೆಕ್ ಲೋಬೋ ಗುಂಪು ಚಟುವಟಿಕೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.