ADVERTISEMENT

ಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 5:03 IST
Last Updated 21 ನವೆಂಬರ್ 2025, 5:03 IST
ಅಶೋಕ ಹಾಸ್ಯಗಾರ 
ಅಶೋಕ ಹಾಸ್ಯಗಾರ    

ಶಿರಸಿ: ಉಡುಪಿಯ ಕಾಂತಾವರ ಕನ್ನಡ ಸಂಘವು ಕೊಡಮಾಡುವ ಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿಗೆ ಇಲ್ಲಿನ ಬರಹಗಾರ ಅಶೋಕ ಹಾಸ್ಯಗಾರ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹10 ಸಾವಿರ ನಗದು ಮತ್ತು ತಾಮ್ರಪತ್ರ ಒಳಗೊಂಡಿದೆ.

‘ದಶರೂಪಕಗಳ ದಶಾವತಾರ’ ಎಂಬ ಕೃತಿಯು ಅಪರೂಪವಾದ ಸಂಶೋಧನಾ ಗ್ರಂಥವಾಗಿದೆ. ಮಂಗಳೂರು ವಿಶ್ವ ವಿದ್ಯಾಲಯದ ‘ಯಕ್ಷಮಂಗಳ’ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕಾಂತಾವರ ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT