ಮರ ಬಿದ್ದು ಯುವಕ ಸಾವು
– ಪ್ರಜಾವಾಣಿ ಚಿತ್ರ
ಯಲ್ಲಾಪುರ: ತಾಲ್ಲೂಕಿನ ಮಂಚಿಕೇರಿ ಮಾಳಕೊಪ್ಪ ಸಮೀಪ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬನ ಮೇಲೆ ಬುಧವಾರ ಮರ ಬಿದ್ದು ಮೃತಪಟ್ಟಿದ್ದಾನೆ.
ಕಬ್ಬಿನಗದ್ದೆ ಗ್ರಾಮದ ವಿನಯ ಮಂಜುನಾಥ ಗಾಡಿಗ (27) ಮೃತ ವ್ಯಕ್ತಿ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ದೊಡ್ಡ ಗಾತ್ರದ ಮರ ಮುರಿದು ಬಿದ್ದಿದೆ. ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರಂತರವಾಗಿ ಗಾಳಿ ಮಳೆ ಇದ್ದ ಕಾರಣ ಮರ ಮುರಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.