ADVERTISEMENT

ಯಲ್ಲಾಪುರ | ಉಮ್ಮಚಗಿ ವಿದ್ಯಾಥಿ೯ಗಳಿಗೆ ಸ್ವರ್ಣ ಪದಕ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:24 IST
Last Updated 13 ಫೆಬ್ರುವರಿ 2026, 7:24 IST
ಯಲ್ಲಾಪುರ ತಾಲ್ಲೂಕು ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಪಾಠಶಾಲೆಯ ವಿದ್ಯಾಥಿ೯ ಭಾರ್ಗವ ವಿ. ಜಿ. ತಿರುಪತಿಯ ರಾಷ್ಟ್ರಿಯ ಸಂಸ್ಕೃತ ಸಂಸ್ಥಾನದಲ್ಲಿ ನಡೆದ ರಾಷ್ಟ್ರಮಟ್ಟದ ಅಖಿಲ ಭಾರತೀಯ ಶಾಸ್ತ್ರ ಸ್ಪರ್ಧೆಗಳಲ್ಲಿ ಸ್ವರ್ಣ ಪದಕ ಪಡೆಯುತ್ತಿರುವುದು.
ಯಲ್ಲಾಪುರ ತಾಲ್ಲೂಕು ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಪಾಠಶಾಲೆಯ ವಿದ್ಯಾಥಿ೯ ಭಾರ್ಗವ ವಿ. ಜಿ. ತಿರುಪತಿಯ ರಾಷ್ಟ್ರಿಯ ಸಂಸ್ಕೃತ ಸಂಸ್ಥಾನದಲ್ಲಿ ನಡೆದ ರಾಷ್ಟ್ರಮಟ್ಟದ ಅಖಿಲ ಭಾರತೀಯ ಶಾಸ್ತ್ರ ಸ್ಪರ್ಧೆಗಳಲ್ಲಿ ಸ್ವರ್ಣ ಪದಕ ಪಡೆಯುತ್ತಿರುವುದು.   

ಯಲ್ಲಾಪುರ: ತಾಲ್ಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಪಾಠಶಾಲೆಯ ವಿದ್ಯಾಥಿ೯ಗಳು ತಿರುಪತಿಯ ರಾಷ್ಟ್ರಿಯ ಸಂಸ್ಕೃತ ಸಂಸ್ಥಾನದಲ್ಲಿ ಈಚೆಗೆ ನಡೆದ ರಾಷ್ಟ್ರಮಟ್ಟದ ಅಖಿಲ ಭಾರತೀಯ ಶಾಸ್ತ್ರ ಸ್ಪರ್ಧೆಗಳಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ.

ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ಸುಮಂತ ಜೋಶಿ ಪ್ರಥಮ ಸ್ಥಾನ ಹಾಗೂ ಧರ್ಮಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಭಾರ್ಗವ ವಿ .ಜಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದಿರುತ್ತಾರೆ. ಅಕ್ಷರ ಶ್ಲೋಕೀ ಸ್ಪರ್ಧೆಯಲ್ಲಿ ಗುರುಪಾದ ಭಟ್ಟ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಪಡೆದಿದ್ದಾರೆ. ಪಾಠಶಾಲಾ ಅಧ್ಯಕ್ಷ ವಿಶ್ವನಾಥ ಜೋಶಿ ವಿಜೇತರನ್ನು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT