ಮಂಗಳೂರು: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಹಳೆಸೇತುವೆಯಿಂದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಭಾನುವಾರ ಈ ಯುವಕ ನದಿಗೆ ಹಾರಿದ ತಕ್ಷಣ ಕೂಡಲೇ ಹಬ್ಬದ ಸಂಭ್ರಮದಲ್ಲಿದ್ದರೂ ಅಲ್ಲಿನ ಯುವಕರಾದ ಶಮೀರ್ ಮುಹಮ್ಮದ್, ಮೊಮ್ಮು ತೌಸೀಫ್ ಝಾಹಿದ್ ಜಾಯಿ, ಅಕ್ಕರಂಗಡಿಯ ಮುಕ್ತಾರ್, ಆರಿಫ್ ಹೈವೇ ಎಂಬುವವರು ರಕ್ಷಣೆಗಾಗಿ ನದಿಗೆ ಧುಮುಕಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಕರೆದೊಯ್ದರು. ಆದರೆ, ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.