
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ದಾಂಡೇಲಿ(ಉತ್ತರ ಕನ್ನಡ ಜಿಲ್ಲೆ): ಮೌಳಂಗಿ ಸಮೀಪದ ಕಾಳಿ ನದಿಯ ಸಂಗಮ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಗೆಳೆಯರೊಂದಿಗೆ ಸ್ನಾನಕ್ಕೆ ತೆರಳಿದ್ದ ನವಾಝ್ ನಾಯ್ಕ (18) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
‘ಸ್ನಾನ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ನೀರಿನ ಹರಿವು ತೀವ್ರಗೊಂಡು ನವಾಜ್ ನೀರಿನಲ್ಲಿ ಕಾಣೆಯಾದರು. ತಕ್ಷಣವೇ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಫ್ಲೈಕ್ಯಾಚರ್ ರಾಫ್ಟಿಂಗ್ ತಂಡದವರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಿದರು. ನವಾಜ್ ಅವರ ಶವ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ದುಃಖ ಮುಗಿಲು ಮುಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.