ADVERTISEMENT

ನೆತ್ತಿ ಮೇಲೆ ಬಿಸಿಲಿದ್ದರೂ ಕೆಲ ನಿಮಿಷ ಮೂಡದ ನೆರಳು!

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2020, 15:30 IST
Last Updated 30 ಏಪ್ರಿಲ್ 2020, 15:30 IST
ಕಾರವಾರದ ಕೋಡಿಬಾಗದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಶೂನ್ಯ ನೆರಳಿನ ವಿದ್ಯಮಾನವನ್ನು ದಾಖಲಿಸಲಾಯಿತು
ಕಾರವಾರದ ಕೋಡಿಬಾಗದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಶೂನ್ಯ ನೆರಳಿನ ವಿದ್ಯಮಾನವನ್ನು ದಾಖಲಿಸಲಾಯಿತು   

ಕಾರವಾರ: ಶೂನ್ಯ ನೆರಳಿನ ವಿದ್ಯಮಾನವನ್ನು ಇಲ್ಲಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿಗುರುವಾರ ದಾಖಲಿಸಲಾಯಿತು. ನೆತ್ತಿ ಸುಡುವಂಥ ಬಿಸಿಲಿದ್ದರೂ ನೆರಳು ಕಾಣಿಸದ ಸನ್ನಿವೇಶ ಕೆಲವು ನಿಮಿಷಗಳವರೆಗೆ ಮುಂದುವರಿಯಿತು.

ಭೂಮಿಯು ಸೂರ್ಯನಿಗೆ ಪ್ರದಕ್ಷಿಣೆ ಹಾಕುತ್ತ 23.5 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 23.5 ಡಿಗ್ರಿ ಉತ್ತರ ರೇಖಾಂಶಗಳ ನಡುವೆ ಹಾದು ಹೋಗುತ್ತದೆ. ಆಗ ಭೂಮಿಯಲ್ಲಿ ನೆರಳು ಗೋಚರಿಸುವುದಿಲ್ಲ.ಕರ್ಕಾಟಕ ವೃತ್ತ ಮತ್ತು ಮಕರ ಸಂಕ್ರಾಂತಿ ವೃತ್ತದ ನಡುವೆ ಇರುವ ಪ್ರದೇಶಗಳಲ್ಲಿ ಪ್ರತಿ ವರ್ಷ ಎರಡು ಬಾರಿ ಈ ವಿದ್ಯಮಾನ ನಡೆಯುತ್ತದೆ.

ಈ ಬಗ್ಗೆ ಮಾಹಿತಿ ನೀಡಿದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಕ್ಯುರೇಟರ್ ಸಂಜೀವ ದೇಶಪಾಂಡೆ, ‘ನಗರದಲ್ಲಿ ಗುರುವಾರ ಮಧ್ಯಾಹ್ನ12 ಗಂಟೆಯಿಂದ 12.35ರ ಅವಧಿಯಲ್ಲಿ ನೆರಳು ಮೂಡಲಿಲ್ಲ. ಈ ಸಮಯವು ಒಂದು ಊರಿನಿಂದ ಮತ್ತೊಂದು ಊರಿಗೆ ಸ್ವಲ್ಪ ವ್ಯತ್ಯಾಸವಾಗುತ್ತದೆ. ನಗರದಲ್ಲಿ ಕಳೆದ ವರ್ಷ ಜೂನ್‌ನಲ್ಲಿ ನಡೆದಿತ್ತು’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.