ADVERTISEMENT

‘ಕುಟುಂಬ ಕಲ್ಯಾಣ ಯೋಜನೆಯಲ್ಲಿ ಪ್ರಗತಿ’

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 15:29 IST
Last Updated 11 ಆಗಸ್ಟ್ 2022, 15:29 IST
‘ವಿಶ್ವ ಜನಸಂಖ್ಯಾ ದಿನಾಚರಣೆ 2021– 22’ನೇ ಸಾಲಿನ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಕಾರವಾರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಜಿ.ಪಂ ಸಿ.ಇ.ಒ ಪ್ರಿಯಾಂಗಾ.ಎಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಆರ್.ಸಿ.ಎಚ್.ಒ ಡಾ.ರಮೇಶ ರಾವ್ ಇದ್ದಾರೆ.
‘ವಿಶ್ವ ಜನಸಂಖ್ಯಾ ದಿನಾಚರಣೆ 2021– 22’ನೇ ಸಾಲಿನ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಕಾರವಾರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಜಿ.ಪಂ ಸಿ.ಇ.ಒ ಪ್ರಿಯಾಂಗಾ.ಎಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಆರ್.ಸಿ.ಎಚ್.ಒ ಡಾ.ರಮೇಶ ರಾವ್ ಇದ್ದಾರೆ.   

ಕಾರವಾರ: ‘ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯೋಜನೆಗಳಾದ ಲಸಿಕೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್.ಬಿ.ಎಸ್.ಕೆ), ಕುಟುಂಬ ಯೋಜನೆ ಮುಂತಾದವು ಪ್ರಗತಿ ಸಾಧಿಸುತ್ತಿವೆ. ಈ ಸಾಧನೆ ಮುಂದುವರಿಯಲು ಎಲ್ಲರ ಸಹಕಾರ ಅಗತ್ಯ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ ಹೇಳಿದರು.

‘ವಿಶ್ವ ಜನಸಂಖ್ಯಾ ದಿನಾಚರಣೆ 2021– 22’ನೇ ಸಾಲಿನ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಸಾಧನೆ ಕೈಗೊಂಡ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

‘ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಕೋವಿಡ್ ಹಾಗೂ ಇನ್ನಿತರ ಕಾರಣಗಳಿಂದ ಕುಟುಂಬ ಕಲ್ಯಾಣ ಯೋಜನೆಯು ಪ್ರಗತಿಯಲ್ಲಿ ಹಿನ್ನಡೆ ಉಂಟಾಗಿತ್ತು. ಆದರೂ ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣ ಯೋಜನೆಯ ಅರಿವು ಕಾರ್ಯಕ್ರಮಗಳಿಂದ ಈ ವರ್ಷ ಪ್ರಗತಿ ಕಾಣುತ್ತಿದೆ’ ಎಂದು ಹೇಳಿದರು.

ADVERTISEMENT

‘ಕುಟುಂಬ ಕಲ್ಯಾಣ ಯೋಜನೆಗಳ ಬಗ್ಗೆ ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಸಾರ್ವಜನಿಕರಲ್ಲಿ ಮೊದಲನೇ ಹಂತದಲ್ಲಿಯೇ ಅರಿವು ಮೂಡಿಸಬೇಕು. ಅಂಥ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರನ್ನು ಗುರುತಿಸಿದಾಗ ಹೆಚ್ಚಿನ ಪ್ರಗತಿ ಸಾಧ್ಯ’ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರದ್ ನಾಯಕ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಮೇಶ್ ರಾವ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನ್ನಪೂರ್ಣಾ ವಸ್ತ್ರದ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೃಂದಾ ಥಾಮ್ಸೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎನ್.ಕನ್ನಕ್ಕನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.