ADVERTISEMENT

ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 5:30 IST
Last Updated 14 ಡಿಸೆಂಬರ್ 2025, 5:30 IST
ಹೊಸಪೇಟೆಯಲ್ಲಿ ಶನಿವಾರ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಉದ್ಘಾಟಿಸಿದರು  –ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಶನಿವಾರ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಉದ್ಘಾಟಿಸಿದರು  –ಪ್ರಜಾವಾಣಿ ಚಿತ್ರ   

ಹೊಸ‍ಪೇಟೆ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಜಿಲ್ಲಾ ಡಿಡಿಪಿಐ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಅಮರಾವತಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.

ಡಿಡಿಪಿಐ  ವೆಂಕಟೇಶ್‍ ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಕರ ದೈನಂದಿನ ಪಾಠ ಪ್ರವಚನ ಒತ್ತಡಗಳಿಂದ ಸ್ವಲ್ಪ ಮಟ್ಟಿಗೆ ಒತ್ತಡವನ್ನು ದೂರ ಮಾಡಲು ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳು ಉತ್ತಮ ವೇದಿಕೆ ಎಂದರು.

ಕಾರ್ಯಕ್ರಮದ ನೋಡಲ್ ಅಧಿಕಾರಿ ರಾಜಶೇಖರ್‌ ಪ್ರಾಸ್ತಾವಿಕ ಮಾತನಾಡಿ, ಆಶುಬಾಷಣ, ಭಕ್ತಿಗೀತೆ, ಸ್ಥಳದಲ್ಲಿ ಕಲಿಕೋಪಕರಣ ತಯಾರಿಕೆ, ರಸಪ್ರಶ್ನೆ ಸೇರಿದಂತೆ 7 ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಇದರಲ್ಲಿ ವಿಜೇತರಾದವರು ರಾಜ್ಯಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ತಿಳಿಸಿದರು. ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ADVERTISEMENT

ಅಧ್ಯಕ್ಷತೆಯನ್ನು ಪ್ರಭಾರ ಪ್ರಾಚಾರ್ಯೆ ವೀಣಾಕುಮಾರಿ ವಹಿಸಿದ್ದರು. ವಿಷಯ ಪರಿವೀಕ್ಷಕ ಎಚ್.ಎಂ.ವಿಶ್ವನಾಥ ಬಸವಂತಯ್ಯ ಹಿರೇಮಠ, ಪ್ರೌಢ ಶಾಲಾ ಮುಖ್ಯೋಪಾದ್ಯಾಯ ವೆಂಕಟೇಶ್ ಕುಲಕರಣಿ, ಪ್ರವೀಣಾ ಬಿ ಹಲಗಣಿ, ಸಂಘದ ಪದಾಧಿಕಾರಿಗಳಾದ ಸಿದ್ಧರಾಧ್ಯ, ಬಸವರಾಜ ಕೆ. ಆರ್.ಬಿ. ಬಸವರಾಜ, ಟಿ.ವಿಶ್ವನಾಥ, ಕೆ.ಬಿ.ತಿಮ್ಮಪ್ಪ ಇತರರು ಇದ್ದರು.

Cut-off box - ಪತ್ರಿಕಾ ಪ್ರಕಟಣೆಗಾಗಿದಿನಾಂಕ : 13.12.2025. ಶ್ರೀ ಬಸವರಾಜ.ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ ಅಭಿನಂದನೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ ಹೊಸಪೇಟೆ ವತಿಯಿಂದ ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ “ಆಶುಭಾಷಣ ಸ್ಪರ್ಧೆ”ಯಲ್ಲಿ ಶ್ರೀ ಬಸವರಾಜ.ಕೆ. ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ 88-ಮುದ್ಲಾಪುರ ಹೊಸಪೇಟೆರವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶ್ರೀಯುತ ಬಸವರಾಜ.ಕೆ.ರವರಿಗೆ ಇಲಾಖೆಯ ಅಧಿಕಾರಿಗಳು ವಿಜಯನಗರ ಜಿಲ್ಲಾ ನೌಕರರ ಸಂಘ ಶಿಕ್ಷಕರ ಸಂಘ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಶಿಕ್ಷಕರು ಹಿತೈಶಿಗಳು ಅಭಿನಂಧನೆ ತಿಳಿಸಿ ರಾಜ್ಯ ಮಟ್ಟಕ್ಕೆ ಶುಭಹಾರೈಸಿರುತ್ತಾರೆ. ಶ್ರೀ ಪ್ರಕಾಶ್ ಶಿಕ್ಷಕರು ಗೌರವ ಕಾರ್ಯದರ್ಶಿಗಳು ಕನ್ನಡ ಸಾಹಿತ್ಯ ಪರಿಷತ್ ಹೊಸಪೇಟೆಮೊ : 9880021322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.