
ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‍ಗಳನ್ನು ಅಳವಡಿಸುವ ಕಾರ್ಯ ಮಂಗಳವಾರದಿಂದ ಆರಂಭವಾಗಿದ್ದು, ಇದಕ್ಕಾಗಿ ನೀರಿನ ಪ್ರಮಾಣ ಕಡಿಮೆ ಮಾಡುವ ಹಿನ್ನೆಲೆಯಲ್ಲಿ ನದಿಗೆ 5,500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.
ಜಲಾಶಯದಲ್ಲಿ ಪ್ರಸ್ತು 63.998 ಟಿಎಂಸಿ ನೀರು ಸಂಗ್ರಹ ಇದ್ದು, ಗೇಟ್ ಅನ್ನು ಅಳವಡಿಸುವ ಹಿನ್ನೆಲೆಯಲ್ಲಿ ಈ ನೀರನ್ನು ಕಡಿಮೆಗೊಳಿಸಿ, 43 ಟಿಎಂಸಿ ಮಟ್ಟಕ್ಕೆ ತರಬೇಕಿದೆ. ಆಗ ಗೇಟಿನ ಪೂರ್ಣ ಭಾಗವನ್ನು ತೆರವುಗೊಳಿಸಲು ಸಾಧ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟವನ್ನು ಇಳಿಸುವ ಕುರಿತು ರಾಜ್ಯ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಿಗಳ ಮಟ್ಟದ ವರ್ಚುವಲ್ ಸಭೆಯನ್ನು ಮಂಗಳವಾರ ನಡೆಸಲಾಗಿದೆ.
ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಆಯಾ ರಾಜ್ಯಗಳಿಗೆ ಹರಿಸಬಹುದಾದ ನೀರನ್ನು ಕಾಲುವೆ ಹಾಗೂ ನದಿಯ ಮೂಲಕ ಹರಿಸಲು ಸಭೆ ನಿರ್ಣಯ ಕೈಗೊಂಡಿತು. ಆಯಾ ರಾಜ್ಯಗಳ ಅಗತ್ಯಕ್ಕೆ ಅನುಗುಣವಾಗಿ ಕುಡಿಯುವ ನೀರನ್ನು ಬಿಡುಗಡೆ ಮಾಡಲು ಸಹ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಲಾಶಯದ 33 ಕ್ರೆಸ್ ಗೇಟ್‍ಗಳ ಪೈಕಿ 18ನೇ ಗೇಟ್ ಅನ್ನು ಯಶಸ್ವಿಯಾಗಿ ತೆರವುಗೊಳಿಸಿದ ಬಳಿಕ, ಈಗ 20ನೇ ಗೇಟ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಉಳಿದ ಗೇಟ್‍ಗಳನ್ನು ಡಿ.20ರಿಂದ ಹಂತ ಹಂತವಾಗಿ ತೆರವುಗೊಳಿಸಿದ ಬಳಿಕ ಹೊಸ ಗೇಟ್‍ಗಳನ್ನು ಅಳವಡಿಸಲು ಮಂಡಳಿ ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.