ADVERTISEMENT

ಹೊಸಪೇಟೆ: ಪುಸ್ತಕ ಮಾರಾಟ ಅಭಿಯಾನಕ್ಕೆ ಉತ್ತಮ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 12:22 IST
Last Updated 22 ಆಗಸ್ಟ್ 2022, 12:22 IST
   

ಹೊಸಪೇಟೆ (ವಿಜಯನಗರ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೋಮವಾರ ನಗರದ ವಿಜಯನಗರ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಮೃತ ಪುಸ್ತಕ ಮಾರಾಟ ಅಭಿಯಾನಕ್ಕೆ ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಅದರಲ್ಲೂ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು, ಪದವಿ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅವರಿಗಿಷ್ಟವಾದ ಪುಸ್ತಕಗಳನ್ನು ಖರೀದಿಸಿದರು. ಅಕಾಡೆಮಿಯ ಎಲ್ಲ ಪುಸ್ತಕಗಳ ಮೇಲೆ ಶೇ 50ರಷ್ಟು ರಿಯಾಯಿತಿ ಇದ್ದದ್ದರಿಂದ ಹೆಚ್ಚಿನವರು ಖರೀದಿಗೆ ಆಸಕ್ತಿ ತೋರಿಸಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನಗಳ ಕಥಾನಕ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

‘ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ಆಗಾಧವಾಗಿದೆ. ಅದನ್ನು ಕನ್ನಡಿಗರಿಗೆ ತಲುಪಿಸುವ ಉದ್ದೇಶದಿಂದ 'ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ' ಸಾಕ್ಷ್ಯಚಿತ್ರ ಪ್ರದರ್ಶನವನ್ನು ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟದ ಕುರಿತು ಆಯಾ ಜಿಲ್ಲೆಗಳ ಕೊಡುಗೆಯ ಕುರಿತು ಪುಸ್ತಕಗಳು ಅಕಾಡೆಮಿಯಿಂದ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು‘ ಎಂದು ಅಧ್ಯಕ್ಷ ಬಿ.ವಿ.ವಸಂತ್ ಕುಮಾರ್ ತಿಳಿಸಿದರು.

ADVERTISEMENT

ಸಂಚಾಲಕಿ ಛಾಯಾ ಭಗವತಿ, ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಸುಂಡಿ ನಾಗರಾಜಗೌಡ, ಪ್ರಾಂಶುಪಾಲ ವಿ.ಎಸ್.ಪ್ರಭಯ್ಯ, ಪ್ರಾಧ್ಯಾಪಕ ಮೃತ್ಯುಂಜಯ ರುಮಾಲೆ, ನಿವೃತ್ತ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ, ಮಲ್ಲಿಕಾರ್ಜುನ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.