ಹೊಸಪೇಟೆ (ವಿಜಯನಗರ): ಕರಿಬೇವು ತುಂಬಿದ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯಗಳಾಗಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ನಡೆದಿದೆ.
ನಸುಕಿನ 3 ಗಂಟೆ ಸುಮಾರಿಗೆ ನಿದ್ದೆ ಮಂಪರಿನಲ್ಲಿ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿಯಲ್ಲಿ ಆಂಧ್ರಪ್ರದೇಶದಿಂದ ಮುಂಬೈಗೆ ಕರಿಬೇವು ಸಾಗಿಸಲಾಗುತ್ತಿತ್ತು. ಹೊಸಪೇಟೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.