ADVERTISEMENT

ಗ್ರಾಮದಲ್ಲೇ ಸಿಗಲಿವೆ ಸರ್ಕಾರಿ ಸವಲತ್ತು–ಡಿಸಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 12:44 IST
Last Updated 27 ಮಾರ್ಚ್ 2023, 12:44 IST
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅವರು ಹೊಸಪೇಟೆ ತಾಲ್ಲೂಕಿನ ತಾಳೆ ಬಸಾಪುರ ತಾಂಡಾ ನಿವಾಸಿಗಳಿಗೆ ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸಿದರು
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅವರು ಹೊಸಪೇಟೆ ತಾಲ್ಲೂಕಿನ ತಾಳೆ ಬಸಾಪುರ ತಾಂಡಾ ನಿವಾಸಿಗಳಿಗೆ ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸಿದರು   

ಹೊಸಪೇಟೆ (ವಿಜಯನಗರ): ‘ತಾಂಡಾಗಳನ್ನು ಸರ್ಕಾರ ಕಂದಾಯ ಗ್ರಾಮಗಳಾಗಿ ಘೋಷಿಸಿದ್ದು, ಇನ್ಮುಂದೆ ಸರ್ಕಾರದ ಎಲ್ಲ ಸವಲತ್ತುಗಳು ಗ್ರಾಮದಲ್ಲೇ ಸಿಗಲಿವೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಕಂದಾಯ ಇಲಾಖೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ತಾಳೆ ಬಸಾಪುರ ತಾಂಡಾ ನಿವಾಸಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರವು ವಿವಿಧ ಮಾನದಂಡಗಳನ್ನು ಆಧರಿಸಿ ಹೊಸದಾಗಿ ಕಂದಾಯ ಗ್ರಾಮಗಳನ್ನು ಘೋಷಿಸಿದೆ. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ದೊರಕಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಮಜಿರೆ ಗ್ರಾಮ ಹಾಗೂ ತಾಂಡಾಗಳನ್ನು ಗುರುತಿಸಿ ಕಂದಾಯ ಗ್ರಾಮಗಳಾಗಿ ಘೋಷಿಸಿ ರಾಜ್ಯದಾದ್ಯಂತ ಏಕಕಾಲಕ್ಕೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರರಾದ ವಿಶ್ವಜೀತ್ ಮೆಹ್ತಾ, ಮೇಘ, ಕಂದಾಯ ಇಲಾಖೆಯ ಅಂದಾನಗೌಡ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.