ADVERTISEMENT

ಸ್ಪ್ರಿಂಕ್ಲರ್ ಘಟಕಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 14:19 IST
Last Updated 31 ಜುಲೈ 2024, 14:19 IST
ಹೂವಿನಹಡಗಲಿ ತಾಲ್ಲೂಕಿನ ಸಿಂಗಟಾಲೂರು ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಶಾಸಕ ಕೃಷ್ಣನಾಯ್ಕ ಹಾಗೂ ಮಠಾಧೀಶರು ಬಾಗಿನ ಅರ್ಪಿಸಿದರು.
ಹೂವಿನಹಡಗಲಿ ತಾಲ್ಲೂಕಿನ ಸಿಂಗಟಾಲೂರು ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಶಾಸಕ ಕೃಷ್ಣನಾಯ್ಕ ಹಾಗೂ ಮಠಾಧೀಶರು ಬಾಗಿನ ಅರ್ಪಿಸಿದರು.   

ಹೂವಿನಹಡಗಲಿ: ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಘಟಕ ಯೋಜನೆಯಡಿ ತುಂತುರು (ಸ್ಪ್ರಿಂಕ್ಲರ್) ನೀರಾವರಿ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಹೂವಿನಹಡಗಲಿ, ಹಿರೇಹಡಗಲಿ, ಇಟ್ಟಿಗಿ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಹ್ಮದ್ ಆಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೂವಿನಹಡಗಲಿ ತಾಲ್ಲೂಕಿನ ಸಿಂಗಟಾಲೂರು ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಶಾಸಕ ಕೃಷ್ಣನಾಯ್ಕ ಹಾಗೂ ಮಠಾಧೀಶರು ಬಾಗಿನ ಅರ್ಪಿಸಿದರು.

ಸಿಂಗಟಾಲೂರು ಬ್ಯಾರೇಜ್ ಭರ್ತಿ: ತುಂಗಭದ್ರೆಗೆ ಬಾಗಿನ

ADVERTISEMENT

ಹೂವಿನಹಡಗಲಿ: ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜ್ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ಕೃಷ್ಣನಾಯ್ಕ ಅವರು ಬುಧವಾರ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ತುಂಗಭದ್ರೆಗೆ ಬಾಗಿನ ಸಮರ್ಪಿಸಿದರು. ಗಂಗಾಪೂಜೆ ನೆರವೇರಿಸಿದ ಬಳಿಕ ಬ್ಯಾರೇಜ್ ನ ಹಿನ್ನೀರಿಗೆ ಬಾಗಿನ ಅರ್ಪಿಸಿದರು. ಇದೇ ವೇಳೆ ಮಾಗಳ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದರು. ನಂದಿಪುರದ ಮಹೇಶ್ವರ ಸ್ವಾಮೀಜಿ ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಕೊಟ್ಟೂರು ಚಾನುಕೋಟಿ ಮಠದ ಸ್ವಾಮೀಜಿ ಕೊಂಬಳಿ ಚೌಕಿಮಠದ ಗಾಡಿತಾತ ಮೈನಳ್ಳಿಯ ಸಿದ್ದೇಶ್ವರ ಸ್ವಾಮೀಜಿ ಶ್ರೀರಾಮ ದೇವಸ್ಥಾನದ ರಾಮಸ್ವಾಮಿ ರಾಕೇಶಯ್ಯ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಮಂಡಲ ಅಧ್ಯಕ್ಷ ಹಣ್ಣಿ ಶಶಿಧರ ಮುಖಂಡರಾದ ಎಂ.ಪರಮೇಶ್ವರಪ್ಪ ಎಚ್.ಪೂಜಪ್ಪ ಎನ್.ಕೋಟೆಪ್ಪ ಡಾ. ಲಕ್ಷ್ಮಣನಾಯ್ಕ ಕೆ.ಪುತ್ರೇಶ ಶಿವಪುರ ಸುರೇಶ ಕೆ.ಪತ್ರೇಶ ಪ್ರಕಾಶ ಯಲಗಚ್ಚಿನ ವೀರಸಿಂಗ್ ರಾಠೋಡ್ ವಿಶ್ವನಾಥ ಮಂತ್ರೋಡಿ ಸಿಂಗಟಾಲೂರು ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಮೂರ್ತಿ ಎಇಇಗಳಾದ ರಾಘವೇಂದ್ರ ಡಿ.ಎನ್.ರಾಜು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.