ADVERTISEMENT

ಅರಸೀಕೆರೆ | 176 ಗಣೇಶ ಮೂರ್ತಿ ಪ್ರತಿಷ್ಠಾಪನೆ; 117 ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 14:39 IST
Last Updated 9 ಸೆಪ್ಟೆಂಬರ್ 2024, 14:39 IST
ಅರಸೀಕೆರೆ ಹೋಬಳಿ ನಾಗತಿಕಟ್ಟೆ ತಾಂಡದಲ್ಲಿ ಸೋಮವಾರ ಅದ್ದೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜಿಸಲಾಯಿತು
ಅರಸೀಕೆರೆ ಹೋಬಳಿ ನಾಗತಿಕಟ್ಟೆ ತಾಂಡದಲ್ಲಿ ಸೋಮವಾರ ಅದ್ದೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜಿಸಲಾಯಿತು   

ಅರಸೀಕೆರೆ: ಹೋಬಳಿ ವ್ಯಾಪ್ತಿಯಲ್ಲಿ ಗೌರಿ ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಅರಸೀಕೆರೆ, ಉಚ್ಚಂಗಿದುರ್ಗ, ಕಂಚಿಕೆರೆ ಗ್ರಾಮ ಸೇರಿದಂತೆ ವಿವಿಧೆಡೆಗಳಲ್ಲಿ 176 ಗಣೇಶ ಮೂರ್ತಿಯನ್ನು ಪ್ರಮುಖ ಬೀದಿ, ದೇವಸ್ಥಾನ, ಶಾಲೆಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು.

ಮೊದಲ ದಿನವಾದ ಶನಿವಾರ 3 ಗಣೇಶ ಮೂರ್ತಿಯನ್ನು, ಮೂರನೇ ದಿನವಾದ ಸೋಮವಾರ 117 ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಐದನೇ ದಿನಕ್ಕೆ 46 ಹಾಗೂ 9ನೇ ದಿನಕ್ಕೆ ವಿಸರ್ಜನೆ ಮಾಡಲಾಗುವುದು.

ADVERTISEMENT

ನಾಗತಿಕಟ್ಟೆ ತಾಂಡದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆದವು. ಮಹಿಳೆಯರು, ಯುವಕರು ಕುಣಿದು ಕುಪ್ಪಳಿಸಿದರು. ಪರಸ್ಪರ ಬಣ್ಣ ಎರಚಿ ಸಂಭ್ರಮ ಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.