ADVERTISEMENT

ಹೊಸಪೇಟೆ | ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಕೊಲೆ ಆರೋಪಿ ಕಾಲಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 5:10 IST
Last Updated 10 ಏಪ್ರಿಲ್ 2025, 5:10 IST
<div class="paragraphs"><p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ</p></div>

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ

   

ಹೊಸಪೇಟೆ (ವಿಜಯನಗರ): ನಗರದ ಜಂಬುನಾಥ ರಸ್ತೆಯಲ್ಲಿ ಬುಧವಾರ ರಾತ್ರಿ ಯುವಕನ ಬರ್ಬರ ಕೊಲೆ ಮಾಡಿದ ಆರೋಪಿ ಹುಚ್ಚಕಾಳಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ನಸುಕಿನಲ್ಲಿ ನಗರದ ಹೊರವಲಯದ ಮಹಾದೇವ ಇಂಡಸ್ಟ್ರೀಸ್ ಬಳಿ ನಡೆದಿದೆ.

ಕೊಲೆ ಆರೋಪಿ ಹುಚ್ಚಕಾಳಿ ಕೊಲೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಳ್ಳುವ ಪ್ರಯತ್ನದ ವೇಳೆ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ. ಆಗ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಐ ಹಾಗೂ ತನಿಖಾಧಿಕಾರಿ ಹುಲುಗಪ್ಪರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅರೋಪಿ ನಡೆಸಿದ ದಾಳಿಯಿಂದ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಹೆಡ್ ಕಾನ್ ಸ್ಟೆಬಲ್ ಲಿಂಗರಾಜ್ ಮತ್ತು ಕಾನ್ ಸ್ಟೆಬಲ್ ಕೊಟ್ರೇಶ್ ಗಾಯಗೊಂಡಿದ್ದಾರೆ.

ಬುಧವಾರ ರಾತ್ರಿ ಹಳೆ ದ್ವೇಷದ ಹಿನ್ನೆಲೆ ಹೊನ್ನೂರ ಸ್ವಾಮಿ ಎಂಬುವವರನ್ಬು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು.

ಎಸ್ಪಿ ಶ್ರೀಹರಿಬಾಬು ಬಿಎಲ್, ಎಎಸ್ಪಿ ಸಲೀಂ ಪಾಷಾ ಡಿವೈಎಸ್ಪಿ ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದು, ಇಲ್ಲಿನ ಸರ್ಕಾರಿ 100 ಹಾಸಿಗೆ ಆಸ್ಪತ್ರೆಯಲ್ಲಿ ಆರೋಪಿ ಮತ್ತು ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.