
ಕಲಬುರಗಿ: ಇದೇ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಇಲ್ಲಿನ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನ ಪೀಠದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಹಾಗೂ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್.ಅಪ್ಪ ಅವರಿಗೆ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಮತ್ತು ಕರಪತ್ರ ನೀಡಲಾಯಿತು.
ಈ ವೇಳೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬಿಜೆಪಿಯ ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡಿ, ಮಹಾನಗರ ಪಾಲಿಕೆ ಸದಸ್ಯ ರಾಮಚಂದ್ರ ಗುಮ್ಮಟ ಪಾಲ್ಗೊಂಡಿದ್ದರು.
ಅಯೋಧ್ಯೆಯ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಬರುವಂತೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ಎಸ್. ದೇಶಮುಖ ಅವರಿಗೆ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರು ಆಮಂತ್ರಣ ನೀಡಿದರು.
ಸಂಘದ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣ ಜೋಶಿ, ಸೇವಾ ಭಾರತೀಯ ಅಧ್ಯಕ್ಷ ರಮೇಶ ತಿಪ್ಪನೂರ ಹಾಗೂ ಭೀಮಾಶಂಕರ ಅವರು ಆಮಂತ್ರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.