ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 116ನೇ ಜಯಂತಿಯನ್ನು ನಗರದಲ್ಲಿ ಬುಧವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ವಿಶೇಷ ಅಲಂಕಾರ ಮಾಡಿ, ಗೌರವ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವ ಪ್ರಭು ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ವಿಚಾರಧಾರೆಗಳು, ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಅವರನ್ನು ಕೇವಲ ಜಯಂತಿಗೆ ಸೀಮಿತಗೊಳಿಸಬಾರದು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಮುಖಂಡರಾದ ಎಂ.ಸಿ. ವೀರಸ್ವಾಮಿ, ಪರಶುರಾಮ ಸೇರಿದಂತೆ ಇತರರಿದ್ದರು. ತಾಲ್ಲೂಕು ಕಚೇರಿ ಆವರಣದಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಗೌರವ ಸಲ್ಲಿಸಿದರು. ಗ್ರೇಡ್-2 ತಹಶೀಲ್ದಾರ್ ಅಮರನಾಥ್, ಶಿರಸ್ತೇದಾರ್ ಶ್ರೀಧರ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.